Wednesday, May 8, 2024
Homeತಾಜಾ ಸುದ್ದಿಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರು ಚಾಲಕನ ಕಾಲು ಮುರಿತ

ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರು ಚಾಲಕನ ಕಾಲು ಮುರಿತ

spot_img
- Advertisement -
- Advertisement -

ಶಿವಮೊಗ್ಗ: ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಂಗಳೂರು ನೋಂದಣಿಯ ಕಾರಿಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ  ತೂದೂರು ಬಳಿ ಲಾರಿ-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕನಿಗೆ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.

ಲಾರಿ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಮರಳು ತುಂಬಲು ಹೋಗುತ್ತಿತ್ತು ಎಂದು ಹೇಳಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಮಾಳೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!