Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಎರಡು ಲಾರಿಗಳ ನಡುವೆ ನಡೆದ ಅಪಘಾತ; ಬಿಸಿ ಜಲ್ಲಿ ಮಿಶ್ರಿತ ಡಾಂಬಾರು ಬಿದ್ದು ಲಾರಿ...

ಬಂಟ್ವಾಳ; ಎರಡು ಲಾರಿಗಳ ನಡುವೆ ನಡೆದ ಅಪಘಾತ; ಬಿಸಿ ಜಲ್ಲಿ ಮಿಶ್ರಿತ ಡಾಂಬಾರು ಬಿದ್ದು ಲಾರಿ ಚಾಲಕ ಸಾವು

- Advertisement -
- Advertisement -

ಬಂಟ್ವಾಳ; ಎರಡು ಲಾರಿಗಳ ನಡುವೆ ನಡೆದ ಅಪಘಾತ ಸಂಭವಿಸಿದಾಗ ಬಿಸಿ ಜಲ್ಲಿ ಮಿಶ್ರಿತ ಡಾಂಬಾರು ಬಿದ್ದು ಲಾರಿ ಚಾಲಕ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ.


ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಮೃತ ವ್ಯಕ್ತಿ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಂಬಾರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜಿಪನಾಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಬಿಟುಮೆನ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.


ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ , ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರು ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಂಬಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಂಬಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಂಬಾರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ

- Advertisement -

Latest News

error: Content is protected !!