Friday, May 3, 2024
Homeಕರಾವಳಿಉಪ್ಪಿನಂಗಡಿ: ಗ್ಯಾರೆಜ್ ಗೆ ನುಗ್ಗಿದ ಲಾರಿ; ಮೂರು ಬಾರಿ ಹಾನಿಗೊಳಗಾದ ಒಂದೇ ಗ್ಯಾರೇಜ್

ಉಪ್ಪಿನಂಗಡಿ: ಗ್ಯಾರೆಜ್ ಗೆ ನುಗ್ಗಿದ ಲಾರಿ; ಮೂರು ಬಾರಿ ಹಾನಿಗೊಳಗಾದ ಒಂದೇ ಗ್ಯಾರೇಜ್

spot_img
- Advertisement -
- Advertisement -

ಉಪ್ಪಿನಂಗಡಿ: ಲಾರಿಯೊಂದು ಗ್ಯಾರೆಜ್ ಗೆ ನುಗ್ಗಿದ ಪರಿಣಾಮ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್‍ಗಳಿಗೆ ಹಾಗೂ ಗ್ಯಾರೇಜ್‍ಗೆ ಹಾನಿಯಾಗ ಘಟನೆ ಜೆ ಪೆರ್ನೆ ಜಂಕ್ಷನ್‍ನಲ್ಲಿ ನಡೆದಿದೆ. ಇಲ್ಲಿನ  ಚಂದ್ರಶೇಖರ್ ಎಂಬವರ ಗ್ಯಾರೇಜಿಗೆ ಲಾರಿ ನುಗ್ಗಿದ್ದು ಹಾನಿಯಾಗಿದೆ.

ಈ ಸಂದರ್ಭ ಗ್ಯಾರೇಜ್‍ನಲ್ಲಿ ಯಾರೂ ಇಲ್ಲದ್ದರಿಂದ ಅಪಾಯವೇನೂ ಸಂಭವಿಸಿಲ್ಲ. ಆದರೆ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್‍ಗಳಿಗೆ ಹಾಗೂ ಗ್ಯಾರೇಜ್‍ಗೆ ಹಾನಿಯಾಗಿದೆ .

ಇನ್ನು ಕೆಲವು ವರ್ಷಗಳ ಹಿಂದೆ ಚಂದ್ರಶೇಖರ್ ಅವರ ಗ್ಯಾರೇಜ್ ಬಳಿಯೇ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದು ಬೆಂಕಿ ಹತ್ತಿಕೊಂಡು, ಗ್ಯಾರೇಜ್ ಕೂಡಾ ಸುಟ್ಟು ಹೋಗಿತ್ತು. ಬಳಿಕ ಆ ಸ್ಥಳ ಬಿಟ್ಟು ಪೆರ್ನೆಯ ಕಟ್ಟಡವೊಂದರಲ್ಲಿ ಗ್ಯಾರೇಜ್ ಆರಂಭಿಸಿದ್ದರು. ಅಲ್ಲೂ  ಕೂಡ ಬೆಂಕಿಗೆ ಆಹುತಿಯಾಗಿತ್ತು. ಬಳಿಕ ಈ ಗ್ಯಾರೇಜ್ ಈಗ ಇರುವ ಸ್ಥಳಕ್ಕೆ ಸ್ಥಳಾಂತರವಾಗಿದ್ದು, ಇದು ಕೂಡಾ ಲಾರಿ ನುಗ್ಗಿ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಈ ಮೂರು ಅವಘಡಗಳು ಸಂಭವಿಸಿದಾಗಲೂ ಚಂದ್ರಶೇಖರ್ ಅವರು ಸ್ಥಳದಲ್ಲಿಲ್ಲದ ಕಾರಣದಿಂದ ಅಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!