- Advertisement -
- Advertisement -
ಚಿಕ್ಕಮಗಳೂರು: ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ಸಾಗಿಸುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಬಿದ್ದು ಅವಘಡ ಸಂಭವಿಸಿದೆ.
ದಟ್ಟವಾಗಿದ್ದ ಮಂಜು ಹಾಗೂ ಮಳೆಯಿಂದಾಗಿ ದಾರಿ ಕಾಣದ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ಲಾರಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಲಾರಿ ಪಲ್ಟಿಯಾದ ಬಳಿಕ ಪ್ರಪಾತದಲ್ಲಿ ಮರಕ್ಕೆ ಸಿಲುಕಿಕೊಂಡಿದೆ.ಇದರಿಂದಾಗಿ ಡ್ರೈವರ್ ಮತ್ತು ಕ್ಲೀನರ್ ಇಬ್ಬರೂ ಬಚಾವಾಗಿದ್ದು, ಸ್ಥಳಿಯರು ರಕ್ಷಣೆ ಮಾಡಿದ್ದಾರೆ.ಘಟನಾ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
- Advertisement -