- Advertisement -
- Advertisement -
ಉಡುಪಿ: ಚಲಿಸುತ್ತಿದ್ದ ಸ್ಕೂಟಿಗೆ ಮಣ್ಣು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿ ಸ್ಕೂಟಿ ಸವಾರೆ ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಬೈಂದೂರು ತಾಲೂಕಿನಲ್ಲಿ ಸಂಭವಿಸಿದೆ.
ಬೈಂದೂರು ತಾಲೂಕಿನ
ನಾಗೂರಿನ ಉಪ್ಪಳ್ಳಿಯಲ್ಲಿ ಈ ಅಪಘಾತ ಸಂಭವಿಸಿದ್ದು,
ಚಾಲಕನ ನಿಯಂತ್ರಣ ತಪ್ಪಿ ಮಣ್ಣು ತುಂಬಿದ್ದ ಲಾರಿ ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಈ ವೇಳೆ ಲಾರಿಯಲ್ಲಿದ್ದ ಮಣ್ಣು ಸ್ಕೂಟಿ ಸವಾರೆ ಮೇಲೆ ಬಿದ್ದಿದ್ದು, ಸ್ಕೂಟಿ ಸಮೇತ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ.
ಮಹಿಳೆ ಮಣ್ಣಿನ ಅಡಿಯಲ್ಲಿ ಸಿಲುಕಿದ ವಿಚಾರ ಗಮನಕ್ಕೆ ಬಂದ ಕೂಡಲೇ
ಸಮಾಜ ಸೇವಕ ಕೊಡಿ ಅಶೋಕ್ ಪೂಜಾರಿ ಎಂಬವರು ಮಣ್ಣಿನ ಅಡಿಯಿಂದ ಮಹಿಳೆಯನ್ನು ಹೊರಗೆ ಎಳೆದು ರಕ್ಷಣೆ ಮಾಡಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
- Advertisement -