Thursday, June 25, 2026
Homeಕರಾವಳಿಉಡುಪಿಕಾರ್ಕಳ: ಪ್ರೇಮ ವೈಫಲ್ಯದ ಹಿನ್ನೆಲೆ ಯುವಕ ಆತ್ಮಹತ್ಯೆ

ಕಾರ್ಕಳ: ಪ್ರೇಮ ವೈಫಲ್ಯದ ಹಿನ್ನೆಲೆ ಯುವಕ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಪ್ರೇಮ ವೈಫಲ್ಯದ ಹಿನ್ನೆಲೆ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಿಟ್ಟೆ ಗ್ರಾಮದ ಪರಪ್ಪಾಡಿಯಲ್ಲಿ ನಡೆದಿದೆ.

ನಿಟ್ಟೆ ಗ್ರಾಮದ ಪರಪ್ಪಾಡಿಯ ಅಭಿಷೇಕ್ ಆಚಾರ್ಯ(23) ಮೃತ ಯುವಕ.

ಮಂಗಳೂರು ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಭಿಷೇಕ್ ಆಚಾರ್ಯ(23) ಯುವತಿ ಸೇರಿದಂತೆ ನಾಲ್ವರು ಗೆಳೆಯರು ವಿಡಿಯೋ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆಂದು ಡೆತ್‌ನೋಟು ಬರೆದಿಟ್ಟು ಗುರುವಾರ ಬೆಳ್ಮಣ್‌ನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್‌ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್‌ಗ‌ಳನ್ನು ಪೊಲೀಸರು ವಶಪಡಿಸಿಕೊಂಡು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್‌ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌ತಿಳಿಸಿದ್ದಾರೆ. ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎನ್ನಲಾಗಿದೆ, ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಭಿಷೇಕ್‌ ಬರೆದ ಡೆತ್‌ನೋಟ್‌ನಲ್ಲಿ ನಾಲ್ವರು ಗೆಳೆಯರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆಂದು ಉಲ್ಲೇಖಿಸಿದ್ದು, ಅವರ ಮೊಬೈಲ್‌ಗ‌ಳನ್ನು ವಶಪಡಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆದರೆ ಆ ಯುವತಿ ವೀಡಿಯೊ ಹಂಚಿಕೊಂಡದ್ದು ಅಥವಾ ಬ್ಲ್ಯಾಕ್ ಮೇಲ್ ನಲ್ಲಿ ಭಾಗಿಯಾಗಿದ್ದಾಳೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿಲ್ಲ. ತನಿಖೆಯ ಭಾಗವಾಗಿ ಆಕೆಯ ಮೊಬೈಲ್‌ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹರಿರಾಮ್‌ ಶಂಕರ್‌ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!