Sunday, June 29, 2025
Homeತಾಜಾ ಸುದ್ದಿಮದುವೆಯಾಗಲು ಒತ್ತಾಯಿಸಿದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ ಪ್ರೇಮಿ

ಮದುವೆಯಾಗಲು ಒತ್ತಾಯಿಸಿದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ ಪ್ರೇಮಿ

spot_img
- Advertisement -
- Advertisement -

ಬೆಂಗಳೂರು:  ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಾನೇಶ್ವರಿ (23) ಕೊಲೆಯಾದ ಯುವತಿ.

ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ಮಾರ್ಚ್ 15 ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಳಿಕ ಸಂತ್ರಸ್ತೆ ದಾನೇಶ್ವರಿಯನ್ನು ಆಸ್ಪತ್ರೆಗೆ ಸೇರಿಸಿ ಆರೋಪಿ ಶಿವಕುಮಾರ್ ಪರಾರಿಯಾಗಿದ್ದಾನೆ. ಆದರೆ ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಆತನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!