Monday, May 6, 2024
Homeಕರಾವಳಿಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆಗೈದ ಪ್ರಿಯಕರ

ಕಾಸರಗೋಡು: ಯುವತಿಯನ್ನು ಬರ್ಬರವಾಗಿ ಕೊಲೆಗೈದ ಪ್ರಿಯಕರ

spot_img
- Advertisement -
- Advertisement -

ಕಾಸರಗೋಡು:ಯುವತಿಯೊಬ್ಬಳನ್ನು ಪ್ರಿಯಕರ ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಘಟನೆ ಕೇರಳದ ಕಾಞ೦ಗಾಡ್ ನಲ್ಲಿ ನಡೆದಿದೆ.ಮಾಂಗಾಡ್ ನ ದೇವಿಕಾ(34) ಕೊಲೆಯಾದ ಯುವತಿ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಕೊಲೆಗೈದ ಆರೋಪಿ. ಕೊಲೆಯ ಬಳಿಕ ಈಕೆಯ ಪ್ರಿಯಕರ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ ಸತೀಶ್ ಹಾಗೂ ದೇವಿಕಾ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇಬ್ಬರ ಕೌಟುಂಬದವರ ನಡುವೆ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು.

ಇನ್ನು ಸತೀಶ್ ಕಳೆದ ಒಂದು ವಾರದಿಂದ ವಸತಿಗೃಹದಲ್ಲಿ ವಾಸವಾಗಿದ್ದ. ನಿನ್ನೆ ಮಧ್ಯಾಹ್ನ ದೇವಿಕಾಳನ್ನು ವಸತಿಗೃಹಕ್ಕೆ ಕರೆಸಿಕೊಂಡು ಕೊಲೆ‌ ಮಾಡಿದ್ದಾನೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!