Saturday, August 29, 2026
Homeತಾಜಾ ಸುದ್ದಿಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ; ವಾಣಿಜ್ಯ LPG ಸಿಲಿಂಡರ್ ಬೆಲೆ 91.50 ರೂ...

ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ; ವಾಣಿಜ್ಯ LPG ಸಿಲಿಂಡರ್ ಬೆಲೆ 91.50 ರೂ ಇಳಿಕೆ

- Advertisement -
- Advertisement -

ನವದೆಹಲಿ : ಕೇಂದ್ರ ಸರ್ಕಾರವು ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.19 ಕೆಜಿ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ 91.50 ರೂ.ಗೆ ಇಳಿಕೆಯಾಗಿದೆ. ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,028 ರೂ. ಆಗಿದೆ.

ಏಪ್ರಿಲ್ 1 ರ ಇಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.50 ರೂ.ಗೆ ಇಳಿಸಲಾಗಿದೆ. ಇದರಿಂದಾಗಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,028 ರೂ.ಇದೆ . ದೇಶೀಯ ಎಲ್ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗ್ಯಾಸ್ ಸಿಲಿಂಡರ್ಗಳ ದರಗಳು ಕಳೆದ ತಿಂಗಳಂತೆಯೇ ಉಳಿದಿವೆ. ಕಳೆದ ತಿಂಗಳು ಕೇಂದ್ರವು ದೇಶೀಯ ಅಡುಗೆ ಅನಿಲದ ಬೆಲೆಯನ್ನು 50 ರೂ.ಗೆ ಹೆಚ್ಚಿಸಿತ್ತು.

ಬೇರೆ ಬೇರೆ ನಗರಗಳಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಗಳ ಬೆಲೆ ಇಂತಿದೆ

ದೆಹಲಿ: 2028 ರೂ

ಕೋಲ್ಕತಾ: 2132 ರೂ.

ಮುಂಬೈ: 1980 ರೂ

ಚೆನ್ನೈ: 2192.50 ರೂ

- Advertisement -

Latest News

error: Content is protected !!