Wednesday, June 3, 2026
Homeತಾಜಾ ಸುದ್ದಿಗ್ಯಾಸ್ ಬಳಕೆದಾರರಿಗೆ ಸಿಹಿ‌ ಸುದ್ದಿ: ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಇಳಿಕೆ

ಗ್ಯಾಸ್ ಬಳಕೆದಾರರಿಗೆ ಸಿಹಿ‌ ಸುದ್ದಿ: ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಇಳಿಕೆ

- Advertisement -
- Advertisement -

ನವೆದೆಹಲಿ : ಗ್ಯಾಸ್ ಬಳಕೆದಾರರಿಗೆ ಭರ್ಜರಿ ಸುದ್ದಿಯೊಂದು‌ ಸಿಕ್ಕಿದೆ. ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 91.50 ರೂಪಾಯಿ ಕಡಿಮೆಯಾಗಿದೆ.

ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 91.5 ರೂಪಾಯಿ ಇಳಿದಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್‌ ಬೆಲೆ ಈಗ 1,885 ಕ್ಕೆ ಲಭ್ಯವಿದೆ. ಆದರೆ, ಸದ್ಯಕ್ಕೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ತೈಲ ಕಂಪನಿಗಳು ಪ್ರತಿ ತಿಂಗಳ 1 ರಂದು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆಯನ್ನು ಗಮನದಲ್ಲಿಟ್ಟುಕೊಂಡು ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಅದೇ ರೀತಿ ಇವತ್ತು ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಸಹ ಪರಿಷ್ಕರಿಸಿವೆ. ಬೆಲೆ ಇಳಿಕೆಯಾಗಿದ್ದು, ಜನರ ಜೇಬಿನಲ್ಲಿರುವ ಹಣಕ್ಕೆ ಕೊಂಚ ರಿಲೀಫ್ ಸಿಕ್ಕಿದೆ.

- Advertisement -

Latest News

error: Content is protected !!