Saturday, June 6, 2026
Homeತಾಜಾ ಸುದ್ದಿಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್...! LPG' ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್…! LPG’ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ

- Advertisement -
- Advertisement -

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಮೇ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ. ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 104 ರೂ. ಗಳಷ್ಟು ಹೆಚ್ಚಿಸಿದೆ.

19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ 2430.50 ರೂಪಾಯಿಗೆ ಏರಿಕೆಯಾಗಿದೆ. ಗೃಹಪಯೋಗಿ ಸಿಲಿಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಎಲ್ಪಿಜಿ ಸಿಲಿಂಡರ್, ಅಡುಗೆ ಎಣ್ಣೆ, ದಿನಸಿ ವಸ್ತುಗಳು ಸೇರಿದಂತೆ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದ್ದು, ಹೋಟೆಲ್ಗಳಲ್ಲಿ ತಿಂಡಿ-ಊಟದ ದರವನ್ನು ಹೆಚ್ಚಳ ಮಾಡಲಾಗಿದೆ. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ದರವನ್ನು ಏರಿಕೆ ಮಾಡಲಾಗಿದ್ದು, ಪ್ರತಿ ಸಿಲಿಂಡರ್ ದರ 2430 ರೂಪಾಯಿಗೂ ಅಧಿಕವಾಗಿರುವುದರಿಂದ ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾಗಿದ್ದು, ಗ್ರಾಹಕರಿಗೆ ಹೊರೆ ವರ್ಗಾಯಿಸುವುದು ಅನಿವಾರ್ಯವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!