Thursday, June 4, 2026
Homeತಾಜಾ ಸುದ್ದಿಟೆಂಡರ್​ಗಾಗಿ ಲಂಚ ಪಡೆದ ಆರೋಪ; ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಟೆಂಡರ್​ಗಾಗಿ ಲಂಚ ಪಡೆದ ಆರೋಪ; ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.

5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಜತೆಗೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

- Advertisement -

Latest News

error: Content is protected !!