Wednesday, June 3, 2026
Homeತಾಜಾ ಸುದ್ದಿತಡರಾತ್ರಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆ

ತಡರಾತ್ರಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆ

- Advertisement -
- Advertisement -

ಭೋಪಾಲ್: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗವನ್ನು ಮಹಿಳೆ ಕತ್ತರಿಸಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದಲ್ಲಿರುವ ಉಮರಿಯಾ ಗ್ರಾಮದಲ್ಲಿ ನಡೆದಿದೆ.

45 ವರ್ಷ ವಯಸ್ಸಿನ ಮಹಿಳೆ 13 ವರ್ಷದ ಮಗನೊಂದಿಗೆ ವಾಸವಾಗಿದ್ದು ರಾತ್ರಿ ಅವರ ಮನೆಗೆ ವ್ಯಕ್ತಿಯೊಬ್ಬ ನುಗ್ಗಿದ್ದು ಆತ ಕಳ್ಳನಿರಬಹುದೆಂದು ಭಯಗೊಂಡ ಮಗ ಮನೆಯಿಂದ ಹೊರಗೆ ಓಡಿಹೋಗಿದ್ದಾನೆ.

ಈ ವೇಳೆ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಆಕೆ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ರಕ್ಷಣೆಗಾಗಿ ಕುಡುಗೋಲಿನಿಂದ ವ್ಯಕ್ತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ರಾತ್ರಿ 1.30ರ ವೇಳೆಯಲ್ಲೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.

ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಕ್ತದ ಮಡುವಲ್ಲಿ ಬಿದ್ದಿದ್ದ ಆರೋಪಿಯನ್ನು ಸಿಧಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ರೇವಾದ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!