Sunday, June 7, 2026
Homeಕೊಡಗುಮಡಿಕೇರಿ: ಸುತ್ತಾಡಲು ಬಂದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ಚಾಕು ಇರಿದ ವ್ಯಕ್ತಿ

ಮಡಿಕೇರಿ: ಸುತ್ತಾಡಲು ಬಂದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ಚಾಕು ಇರಿದ ವ್ಯಕ್ತಿ

- Advertisement -
- Advertisement -

ಮಡಿಕೇರಿ: ಸುತ್ತಾಡಲು ಬಂದ ಒಂದೇ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.

ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಇದ್ದುದ್ದನ್ನು ಗಮನಿಸಿದ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದ್ದು,  ವಿದ್ಯಾರ್ಥಿಗೆ ಇರಿಯುವಾಗ ಅಡ್ಡ ಬಂದ ವಿದ್ಯಾರ್ಥಿನಿಗೂ ಆರೋಪಿ ಇರಿದಿದ್ದಾನೆ ಎಂದು ಹೇಳಲಾಗಿದೆ.

ಆರೋಪಿಯನ್ನು ಸ್ಥಳೀಯರ ಸಹಕಾರದೊಂದಿಗೆ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆರೋಪಿ ಹೊಟೇಲ್ ಸಪ್ಲಯರ್ ಆಗಿದ್ದಾನೆನ್ನಲಾಗಿದೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ಪ್ರಕರಣದಂತೆ ಕಂಡು ಬರುತ್ತಿದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯ ಜೊತೆಗೆ ಇದ್ದುದನ್ನು ಗಮನಿಸಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!