Saturday, June 6, 2026
Homeಇತರಮಡಿಕೇರಿ: ವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಹರಿಬಿಟ್ಟ ಕಾಮುಕರು

ಮಡಿಕೇರಿ: ವಿವಾಹಿತೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಹರಿಬಿಟ್ಟ ಕಾಮುಕರು

- Advertisement -
- Advertisement -

ಮಡಿಕೇರಿ: ತಾಲ್ಲೂಕಿನ ತಾವೂರು ಗ್ರಾಮದಲ್ಲಿ ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ದೃಶ್ಯಗಳನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡು ಮಹಿಳೆಗೆ ಬೆದರಿಕೆ ಹಾಕಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾವೂರು ಗ್ರಾಮದ ಚಿದಾನಂದ ಮತ್ತು ಚೇತನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ವಿವಾಹಿತೆ ಸೌದೆ ತರಲು ಹೋಗಿದ್ದ ವೇಳೆ ಬೆದರಿಸಿ ಆರೋಪಿಗಳು ಅತ್ಯಾಚಾರವೆಸಗಿದ್ದು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಯಾರಿಗಾದರೂ ವಿಷಯ ತಿಳಿಸಿದರೆ ವಿಡಿಯೋ ವೈರಲ್ ಮಾಡುವುದಾಗಿ ಮಹಿಳೆಯನ್ನು ಬೆದರಿಸಿದ್ದು ಆಕೆ ಭಯದಿಂದ ಸುಮ್ಮನಿದ್ದಾರೆ.

ಕೆಲದಿನಗಳ ಬಳಿಕ ಆರೋಪಿಗಳು ವಿಡಿಯೋವನ್ನು ಹರಿಬಿಟ್ಟಿದ್ದು ಇದನ್ನು ತಿಳಿದ ಮಹಿಳೆ ಮಡಿಕೇರಿ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರು ಆಧರಿಸಿ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!