Thursday, June 4, 2026
Homeಕರಾವಳಿಉಡುಪಿಉಡುಪಿಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯಲ್ಲಿ ಆಯಸ್ಕಾಂತೀಯ ಶಕ್ತಿ ಹೆಚ್ಚಾದ ವದಂತಿ: ಉಡುಪಿ ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ

ಉಡುಪಿಯಲ್ಲಿ ಕೋವಿಡ್ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯಲ್ಲಿ ಆಯಸ್ಕಾಂತೀಯ ಶಕ್ತಿ ಹೆಚ್ಚಾದ ವದಂತಿ: ಉಡುಪಿ ಜಿಲ್ಲಾಧಿಕಾರಿಗಳಿಂದ ಸ್ಪಷ್ಟನೆ

- Advertisement -
- Advertisement -

ಉಡುಪಿ: ನಗರದ ಪಿಪಿಸಿ ಕಾಲೇಜು ಸಮೀಪದಲ್ಲಿ ವಾಸವಾಗಿರುವ ರಾಮದಾಸ್‌ ಶೇಟ್ ಎಂಬುವರ ದೇಹಕ್ಕೆ ಲೋಹದ ವಸ್ತುಗಳು ಅಂಟಿಕೊಳ್ಳುತ್ತಿದ್ದು ಕುತೂಹಲಕ್ಕೆ ಕಾರಣವಾಗಿದೆ.

ನಿನ್ನೆ ವಿಡಿಯೊದಲ್ಲಿ ವ್ಯಕ್ತಿಯೊಬ್ಬರ ಮೈಗೆ ಕಬ್ಬಿಣದ ವಸ್ತುಗಳು ಅಂಟಿಕೊಳ್ಳುತ್ತಿರುವುದನ್ನು ನೋಡಿದ ರಾಮದಾಸ್ ಶೇಟ್‌, ಕುತೂಹಲದಿಂದ ತಮ್ಮ ದೇಹದ ಮೇಲೆ ಪರೀಕ್ಷೆ ಮಾಡಿದ್ದಾರೆ. ಈ ವೇಳೆ ಅವರ ದೇಹಕ್ಕೂ ಲೋಹದ ವಸ್ತುಗಳು ಅಂಟಿಕೊಂಡಿವೆ. ‌ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.

ವಿಡಿಯೊ ಬೆನ್ನಲ್ಲೇ ಕೋವಿಡ್ ಲಸಿಕೆ ಹಾಕಿಸಿಕೊಂಡ ಬಳಿಕ ದೇಹದಲ್ಲಿ ಆಯಸ್ಕಾಂತೀಯ ಶಕ್ತಿ ಹೆಚ್ಚಾಗುತ್ತದೆ ಎಂಬ ವದಂತಿ ಜಾಲತಾಣಗಳಲ್ಲಿ ಹರಡಿದ್ದರಿಂದ ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು.‌

ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದರಿಂದ ದೇಹದಲ್ಲಿ ಆಯಸ್ಕಾಂತೀಯ ಶಕ್ತಿ ಹೆಚ್ಚುವುದಿಲ್ಲ. ರಾಮದಾಸ್ ಶೇಟ್ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಲಾಗಿದ್ದು, ಅಣೆ, ಭುಜ, ಬೆನ್ನು, ಹೊಟ್ಟೆ ಹಾಗೂ ಮೊಣಕೈ ಭಾಗದಲ್ಲಿ ಆಯಸ್ಕಾಂತೀಯ ಲಕ್ಷಣಗಳು ಇರುವುದು ಪತ್ತೆಯಾಗಿದೆ. ಆದರೆ, ಕೋವಿಡ್‌ ಲಸಿಕೆ ಹಾಕಿಸಿಕೊಂಡ ಬಳಿಕ ದೇಹದಲ್ಲಿ ಆಯಸ್ಕಾಂತೀಯ ಶಕ್ತಿ ಹೆಚ್ಚಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು. ಕೋವಿಡ್ ಲಸಿಕೆ ಹಾಕಿಸಿಕೊಂಡ ಯಾರಲ್ಲೂ ಆಯಸ್ಕಾಂತೀಯ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದರು.

- Advertisement -

Latest News

error: Content is protected !!