- Advertisement -
- Advertisement -
ಬೆಂಗಳೂರಿನ ವಯಾಲಿಕಾವಲ್ ನಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು. ಎರಡು ದಿನಗಳಿಂದ ಆರೋಪಿಗಾಗಿ ಹುಡುಕಾಡುತ್ತಿದ್ದ ಪೊಲೀಸರಿಗೆ ಸಕೊನೆಗೂ ಆರೋಪಿಯ ಮೂಲ ಪತ್ತೆಯಾಗಿತ್ತು. ಇದೀಗ ಅದರ ಬೆನ್ನಲ್ಲೇ ಆರೋಪಿ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ,
ಅಂದ್ಹಾಗೆ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಆತನನ್ನು ಬಂಧಿಸಲು ಬೆಂಗಳೂರಿನಿಂದ ಪೊಲೀಸರ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.
- Advertisement -