ಮುಂಬೈ : ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಏರುತ್ತಿದ್ದು, ಇತ್ತಿಚೆಗಷ್ಟೆ ಹಲವು ಪತ್ರಕರ್ತರಿಗೆ ಕೊರೋನಾ ಸೋಂಕು ತಗುಲಿತ್ತು. ಇದೀಗ ಪೊಲೀಸರಿಗೆ ಸೋಂಕು ತಗುಲಿದೆ. 96 ಮಂದಿಗೆ ಕೊರೋನಾ ಬಂದಿದ್ದು, ಈ ಪೈಕಿ 15 ಜನ ಅಧಿಕಾರಿಗಳು ಇದ್ದಾರೆ.
ಮುಂಬೈನ ಧಾರಾವಿ ಸ್ಲಂನಲ್ಲಿ 24ರ ಮಂದಿಗೆ ಕೊರೋನಾ ತಗುಲಿದೆ. 95 ಮಂದಿ ಪೊಲೀಸರು ಸೇರಿದಂತೆ ಒಟ್ಟು ಇದುವರೆಗೂ ಮಹಾರಾಷ್ಟ್ರದಲ್ಲಿ 6817 ಮಂದಿಗೆ ಕೋವಿಡ್-19 ಪಾಸಿಟಿವ್ ಧೃಡಪಟ್ಟಿದೆ. ಜತೆಗೆ ಕಳೆದ 24 ಗಂಟೆಗಳಲ್ಲಿ ಸುಮಾರು 18 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದವರ ಸಂಖ್ಯೆ 301ಕ್ಕೆ ಏರಿಕೆಯಾಗಿದೆ.
ಇನ್ನು, ಮಹಾರಾಷ್ಟ್ರದಲ್ಲಿ 957 ಮಂದಿ ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆದ್ದರಿಂದ ಇದೀಗ 5,559 ಮಂದಿ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಸುಮಾರು 1,02,189 ಮಂದಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.