Thursday, April 25, 2024
Homeತಾಜಾ ಸುದ್ದಿಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ: ಎಚ್ಚರಿಕೆ ನೀಡಿದ ಮುಖ್ಯಮಂತ್ರಿ

ಜನರು ಮಾಸ್ಕ್ ಧರಿಸದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ: ಎಚ್ಚರಿಕೆ ನೀಡಿದ ಮುಖ್ಯಮಂತ್ರಿ

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಉಲ್ಪಣವಾಗುತ್ತಿದ್ದು, ಇದು ಸಿಎಂ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮುಂದಿನ 8 ರಿಂದ 15 ದಿನಗಳ ಕಾಲ ಹೊಸ ಸೋಂಕು ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಅಮರಾವತಿ ಮತ್ತು ಆಚಲ್ ಪುರ ನಗರಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಹೇರಲಾಗಿದೆ. ಮಹಾರಾಷ್ಟ್ರದಲ್ಲಿ ಏಕಾಏಕಿ ಲಾಕ್ ಡೌನ್ ಜಾರಿಗೆ ತರುವ ಯಾವುದೇ ಉದ್ದೇಶಗಳಿಲ್ಲ. ಆದರೇ ಜನರು ಸರ್ಕಾರದ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು. ಅಭಿವೃದ್ದಿ ಕಾರ್ಯಗಳಿಗೆ ತೊಡಕಾಗದಂತೆ ಅಗತ್ಯ ಪ್ರದೇಶಗಳಲ್ಲಿ ಮಾತ್ರ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದಿದ್ದಾರೆ.

‘ಅಮರಾವತಿಯಲ್ಲಿ ಇಂದು 1000 ಪ್ರಕರಣಗಳಿವೆ. ರಾಜ್ಯದಲ್ಲಿ 40 ಸಾವಿರ ಸಕ್ರಿಯ ಪ್ರಕರಣಗಳಿಂದ 53 ಸಾವಿರ ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 6,971 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಠಾಕ್ರೆ ಹೇಳಿದರು.

- Advertisement -
spot_img

Latest News

error: Content is protected !!