Saturday, June 6, 2026
Homeಆರಾಧನಾಉಡುಪಿಯ ಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

ಉಡುಪಿಯ ಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

- Advertisement -
- Advertisement -

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಮಂಗಳವಾರದಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.

ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ದೀಕ್ಷೆ ಪಡೆದರು. ಕಿರಿಯ ಯತಿ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್, ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಪ್ರಮುಖರಾದ ಸಂತೋಷ್ ಶೆಟ್ಟಿ ತೆಂಕರಗುತ್ತು ಉಪಸ್ಥಿತರಿದ್ದರು.

- Advertisement -

Latest News

error: Content is protected !!