Friday, May 17, 2024
Homeತಾಜಾ ಸುದ್ದಿಜುಲೈ 31ರವರೆಗೂ ಲಾಕ್‌ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರಕಾರ

ಜುಲೈ 31ರವರೆಗೂ ಲಾಕ್‌ಡೌನ್ ವಿಸ್ತರಿಸಿದ ಮಹಾರಾಷ್ಟ್ರ ಸರಕಾರ

spot_img
- Advertisement -
- Advertisement -

ಮುಂಬೈ, ಜೂನ್ 29: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜುಲೈ 31ರವರೆಗೂ ಲಾಕ್‌ಡೌನ್‌ ವಿಸ್ತರಿಸುವಂತೆ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ಸೋಮವಾರ ಈ ಕುರಿತು ಸೂಚನೆ ನೀಡಿದ್ದು, ಜುಲೈ 31ರವರೆಗೂ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಪಾಲನೆ ಮಾಡಬೇಕೆಂದು ಸಾರ್ವಜನಿಕರಿಗೆ ತಾಕೀತು ಮಾಡಲಾಗಿದೆ.

ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ.

ಜುಲೈ ಅಂತ್ಯದವರೆಗೂ ಲಾಕ್‌ಡೌನ್‌ ವಿಸ್ತರಿಸಿರುವ ಹಿನ್ನೆಲೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಮತ್ತು ರಾಜ್ಯದ ಮಹಾನಗರ ಪಾಲಿಕೆಗಳ ಆಯುಕ್ತರು, ಅನಗತ್ಯ ಚಟುವಟಿಕೆಗಳು ಮತ್ತು ವ್ಯಕ್ತಿಗಳ ಚಲನೆಯನ್ನು ನಿಯಂತ್ರಿಸಲು ನಿರ್ದಿಷ್ಟ ಕ್ರಮಗಳು ಮತ್ತು ಅಗತ್ಯ ನಿರ್ಬಂಧಗಳನ್ನು ಜಾರಿಗೊಳಿಸಬಹುದು. ಇನ್ನು ಮಾಸ್ಕ್ ಧರಿಸುವುದು ಕಡ್ಡಾಯ ಹಾಗು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿರುವ ಸರ್ಕಾರ ಉಲ್ಲಂಘಿಸಿದರೆ ಕ್ರಮ ಜರುಗಿಸಲಾಗುವುದು ಎಂದಿದೆ.

ಪ್ರಸ್ತುತ ಮಹಾರಾಷ್ಟ್ರದಲ್ಲಿ 1,64,626 ಜನರಿಗೆ ಕೊರೊನಾ ಅಂಟಿಕೊಂಡಿದೆ. ಇದರಲ್ಲಿ 70,607 ಕೇಸ್ ಸಕ್ರಿಯವಾಗಿದೆ. 86,575 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೂ 7,429 ಜನರಿಗೆ ಕೊರೊನಾಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರ ದೇಶದಲ್ಲಿ ಅತ್ಯಂತ ಹೆಚ್ಚು ಸೋಂಕು ಬಾಧಿತ ರಾಜ್ಯವಾಗಿದೆ.

- Advertisement -
spot_img

Latest News

error: Content is protected !!