Saturday, January 16, 2021
Home ತಾಜಾ ಸುದ್ದಿ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ : ಜನವರಿ 31ರವರೆಗೆ ಲಾಕ್ ಡೌನ್ ಜಾರಿ

ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ವಿಸ್ತರಣೆ : ಜನವರಿ 31ರವರೆಗೆ ಲಾಕ್ ಡೌನ್ ಜಾರಿ

- Advertisement -
- Advertisement -

ಮುಂಬೈ: ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈಗಾಗಲೇ ದೇಶದಲ್ಲಿ ಒಟ್ಟು 20 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಆಯಾಯ ರಾಜ್ಯಗಳು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಹೀಗಿರುವಾಗಲೇ ಮಹಾರಾಷ್ಟ್ರ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಜನವರಿ 31ರವರೆಗೆ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ವಿಸ್ತರಣೆ ಮಾಡಿದೆ. ಇನ್ನು ಈಗಾಗಲೇ ಈ ಹಿಂದೆ ಕೊರೊನಾ ಮಹಾರಾಷ್ಟ್ರದಲ್ಲಿ ಸಾಕಷ್ಟು ಅನಾಹುತಗಳನ್ನು ಸೃಷ್ಟಿ ಮಾಡಿತ್ತು. ಹಾಗಾಗಿ ಮತ್ತೆ ಇಂತಹ ಅನಾಹುತಗಳು ಆಗೋದು ಬೇಡ ಅನ್ನೋ ಕಾರಣಕ್ಕೆ ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ.

- Advertisement -
- Advertisment -

Latest News

error: Content is protected !!