Saturday, May 18, 2024
Homeತಾಜಾ ಸುದ್ದಿಶಿವಸೇನೆಯ ಪುಂಡಾಟಿಕೆ: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಶಿವಸೇನೆಯ ಪುಂಡಾಟಿಕೆ: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

spot_img
- Advertisement -
- Advertisement -

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿ ಯಾತ್ರಿ ನಿವಾಸದ ಕಟ್ಟಡದ ಮೇಲಿನ ಕನ್ನಡ ಅಕ್ಷರಗಳಿಗೆ ಮಸಿ ಬಳಿದು ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೊಲ್ಲಾಪುರದ ಕಡೆಗೆ ಹೋಗುವ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಶಿವಸೇನೆ ಕಾರ್ಯಕರ್ತರು ಕೊಲ್ಹಾಪುರದಲ್ಲಿ ಕನ್ನಡ ನಾಮಫಕಗಳಿಗೆ ಮಸಿ ಬಳಿದು, ಅಂಗಡಿ, ಮುಂಗಟ್ಟುಗಳ ಮಾಲೀಕರಿಗೆ ಕನ್ನಡ ನಾಮಫಲಕ ಹಾಕಿದರೆ ವ್ಯಾಪಾರ ನಡೆಸಲು ಅವಕಾಶ ನಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದರು. ಇದರ ಬೆನ್ನಲ್ಲೇ ನಿನ್ನೆ ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಶಿವಸೇನೆ ಕಚೇರಿ ಮೇಲೆ ದಾಳಿ ನಡೆಸಿದ್ದರಲ್ಲದೇ ಬೆಳಗಾವಿಯಲ್ಲಿ ಮರಾಠಿ ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವೇಳೆ ಕರವೇ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಕೊಲ್ಹಾಪುರ ಹಾಗೂ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.

ಕೊಲ್ಲಾಪುರದ ಕಡೆಗೆ ಹೋಗುವ ಬಸ್ ಗಳು ನಿಪ್ಪಾಣಿ ಬಳಿಯ ಚೆಕ್ ಪೋಸ್ಟ್ ವರೆಗೆ ಹೋಗುತ್ತದೆ. ಇದನ್ನು ಹೊರತುಪಡಿಸಿದರೆ ಸಾಂಗ್ಲಿ ಮೀರಜ್ ಮೊದಲಾದ ಕಡೆ ಬಸ್ ಸಂಚಾರ ಎಂದಿನಂತಿದೆ ಎಂದು ಕೆಎಸ್ ಆರ್ ಟಿಸಿ ಬೆಳಗಾವಿ ವಿಭಾಗದ ನಿಯಂತ್ರಣಾಧಿಕಾರಿ ಎಂ.ಅರ್. ಮುಂಜಿ ತಿಳಿಸಿದ್ದಾರೆ. ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಪ್ರತಿದಿನ 400 ಬಸ್ ಗಳು ಸಂಚರಿಸುತ್ತಿದ್ದರೆ, ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು.

- Advertisement -
spot_img

Latest News

error: Content is protected !!