Saturday, May 18, 2024
Homeತಾಜಾ ಸುದ್ದಿಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ; ರಾಜನಾಥ್ ಸಿಂಗ್

ಗಾಂಧಿ ಸಲಹೆ ಮೇರೆಗೆ ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ; ರಾಜನಾಥ್ ಸಿಂಗ್

spot_img
- Advertisement -
- Advertisement -

ನವದೆಹಲಿ: ವಿ.ಡಿ. ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದು ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿಯ ಅಂಬೇಡ್ಕರ್ ಇಂಟರ್‌ನ್ಯಾಷನಲ್ ಸೆಂಟರ್‌ನಲ್ಲಿ ಮಂಗಳವಾರ ನಡೆದ ಸಾವರ್ಕರ್ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದಾರೆಂದು ಎಂದು ಹೇಳಿ ದಾರಿ ತಪ್ಪಿಸುತ್ತಿದ್ದಾರೆ, ಆದರೆ ಈ ಕ್ಷಮಾಪಣೆ ಪತ್ರಗಳನ್ನು ಬರೆಯಲು ಸಲಹೆ ನೀಡಿದ್ದು ಮಹಾತ್ಮ ಗಾಂಧಿ ಎಂಬುದು ಗೊತ್ತಿಲ್ಲವೆಂದು ಹೇಳುವ ಮೂಲಕ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರವನ್ನು ಬರೆದರು ಎಂಬುದನ್ನು ಸಾಕಷ್ಟು ಸಲ ಹೇಳಲಾಗಿದೆ. ಅವರ ವಿರುದ್ಧ ಸಾಕಷ್ಟು ಅಪಪ್ರಚಾರ ನಡೆದಿದೆ. ಸತ್ಯ ಏನೆಂದರೆ ಸಾವರ್ಕರ್ ಬಿಡುಗಡೆ ಬಯಸಿ ಕ್ಷಮಾಪಣೆ ಪತ್ರಗಳನ್ನು ಬರೆಯಲಿಲ್ಲ. ಸಾಮಾನ್ಯವಾಗಿ ಒಬ್ಬ ಖೈದಿಗೆ ಕ್ಷಮಾಪಣೆ ಪತ್ರ ಬರೆಯುವ ಹಕ್ಕು ಇದೆ. ಮಹಾತ್ಮ ಗಾಂಧಿ ಅವರು ಕ್ಷಮಾಪಣೆ ಪತ್ರ ಬರೆಯುವಂತೆ ಸಾವರ್ಕರ್ ಅವರಿಗೆ ಸೂಚಿಸಿದರು.

ನಂತರ ಸಾವರ್ಕರ್ ಅವರನ್ನು ಬಿಡುಗಡೆ ಮಾಡುವಂತೆ ಗಾಂಧಿ ಮನವಿ ಮಾಡಿದ್ದರು. ಸ್ವಾತಂತ್ರ್ಯ ಚಳುವಳಿಯನ್ನು ಶಾಂತಿಯುತವಾಗಿ ನಡೆಸಬೇಕು ಎಂದು ಗಾಂಧಿ ಹೇಳಿದ್ದರು. ಅದರಂತೆ ಸಾವರ್ಕರ್ ನಡೆದುಕೊಂಡರು ಎಂದು ರಾಜನಾಥ್ ಸಿಂಗ್ ತಿಳಿಸಿದರು.

- Advertisement -
spot_img

Latest News

error: Content is protected !!