Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಿಮರೋಡಿಯ ಗಡಿಪಾರು ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ತಿಮರೋಡಿಯ ಗಡಿಪಾರು ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಕ್ರಮ ಮರುಪರಿಶೀಲಿಸಿ ಹೊಸದಾಗಿ ಆದೇಶ ನೀಡಲು ಪುತ್ತೂರು ಉಪ ವಿಭಾಗಾಧಿಕಾರಿಯವರಿಗೆ ನಿರ್ದೆಶಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಕ್ರಮವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2026ರ ಜನವರಿ 31ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮಾ.17 ರಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ಹೀಠದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಇಲ್ಲವೆಂದು ತಿಳಿಸಿ

ಇದೇ ವೇಳೆ, ಏಕಸದಸ್ಯ ನ್ಯಾಯಪೀಠದ ಆದೇಶದ ಅನುಸಾರ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಮೂರನೇ ಬಾರಿಗೆ ಪುತ್ತೂರು ಉಪವಿಭಾಗಾಧಿಕಾರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ ಎಂದು ಸರಕಾರದ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಪ್ರಕರಣದ ಹಿನ್ನೆಲೆ: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೋರಾಟ ನಡೆಸು ತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರಿನ
ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ 2025ರ ಸೆ.ಕದಂದು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಸಕಾರಣ ನೀಡಿ ಅಗತ್ಯ ನಿಯಮಗಳನ್ನು ಪಾಲಿಸಿ 15 ದಿನಗಳಲ್ಲಿ ಹೊಸದಾಗಿ ಆದೇಶ ಹೊರಡಿಸುವಂತೆ ಸೂಚಿ ಪ್ರಕರಣವನ್ನು ಮತ್ತೆ ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿತ್ತು.

ಅವರಂತೆ, ಪ್ರಕರಣ ಮರುಪರಿಶೀಲಿಸಿದ್ದ ಪುತ್ತೂರು ಎ.ಸಿ ಮತ್ತೊಮ್ಮೆ ಮಾನ್ವಿ ಸರಹದ್ದಿಗೆ ತಿಮರೋಡಿಯನ್ನು ಗಡಿಪಾರು ಮಮಾಡಿ 2025ರ ಡಿಸೆಂಬರ್ 16ರಂದು ಆದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ತಿದುರೋಡಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಆಕ್ಷೇಪಗಳನ್ನು ಪರಿಗಣಿಸಿ ಮತ್ತು ಅವರ ಅಹವಾಲು ಆಲಿಸಿ ವಾರದಲ್ಲಿ ಮತ್ತೆ ಪ್ರಕರಣದ ಕುರಿತು ಹೊಸದಾಗಿ ಆದೇಶ ಮಾಡಬೇಕು ಎಂದು ನಿರ್ದೇಶಿಸಿ 2024ರ ಜನವರಿ 1ರಂದು ಪುತ್ತೂರು ಉಪವಿಭಾಗಾಧಿಕಾರಿಗೆ ನಿರ್ದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ವಿಭಾಗೀಯ ನ್ಯಾಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದ ತಿಡುರೋಡಿ, ಪ್ರಕರಣವಲ್ಲಿ ಎರಡನೇ ಬಾರಿಗೆ ಪುತ್ತೂರು ಎಸಿಗೆ ಹಿಂದಿರುಗಿ ಸುವ ಅವಶ್ಯತೆ ಇರಲಿಲ್ಲ. ಗಡಿಪಾರು ಮಾಡುವ ಮೂಲಕ ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಅರ್ಜಿದಾರರಿಗೆ ಲಭ್ಯವಿರುವ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲಾಗಿದೆ ಎಂದು ಆಕ್ಷೇಪಿಸಿದ್ದರು.

- Advertisement -

Latest News

error: Content is protected !!