- Advertisement -
![]()
- Advertisement -
ಬೆಳ್ತಂಗಡಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬ್ ನಲ್ಲಿ ಬಿಜೆಪಿಯ ಬಿ ಎಲ್ ಸಂತೋಷ್ ಬಗ್ಗೆ ಅವ್ಯಾಚ ಶಬ್ದಗಳಿಂದ ಬೈದು ವಿಡಿಯೋ ಪ್ರಸಾರವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆ.21 ರಂದು ಉಜಿರೆ ನಿವಾಸದಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಎ3 ಆರೋಪಿ ಅಗಿದ್ದರು. ಈ ಪ್ರಕರದಲ್ಲಿ ವಿಚಾರಣೆಗಾಗಿ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಆ.29 ರಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
- Advertisement -


