Friday, August 28, 2026
Homeಕರಾವಳಿಮಂಗಳೂರುಬೆಳ್ತಂಗಡಿ : ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು

ಬೆಳ್ತಂಗಡಿ : ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿ ಕೊನೆಗೂ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು

- Advertisement -
- Advertisement -

ಬೆಳ್ತಂಗಡಿ : ಉಜಿರೆಯ ರೌಡಿಶೀಟರ್ ಆಗಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕಿ ನಲ್ಲಿ ಅಶಾಂತಿ ಉಂಟು ಮಾಡುವ ಸಾಧ್ಯತೆ ಇರೋದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸರು, ಪುತ್ತೂರು ಎಸಿಗೆ ಅವರನ್ನು ಗಡಿಪಾರು ಮಾಡುವಂತೆ ವರದಿ ನೀಡಿದ್ದರು.. ಅದರಂತೆ ಕೊನೆಗೂ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

- Advertisement -

Latest News

error: Content is protected !!