ಪುತ್ತೂರು : ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೖಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಯಕ್ಷಗಾನ ಕಲಾವಿದ ದಿನೇಶ್ ಕೊಡಪದವು ರವರ ತಾಯಿ ಲೀಲಾವತಿಯವರು ಎ.13 ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇಲಿನ ಬಂಧನದ ಭೀತಿಯಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ತಿಮರೋಡಿಗೆ ಮೇ.26 ರಂದು ನಿರೀಕ್ಷಣಾ ಜಾಮೀನು ಬಗ್ಗೆ ತೀರ್ಪು ನೀಡುವ ವೇಳೆ ನ್ಯಾಯಾಲಯ ಕಠಿಣ ಪದಗಳಿಂದ ತಿಮರೋಡಿ ಬಗ್ಗೆ ಉಲ್ಲೇಸಿದೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆ ಮಹೇಶ್ ತಿಮರೋಡಿ ಆಡಿಯೋದಲ್ಲಿ ಆಡಿದ ಮಾತುಗಳ ಬಗ್ಗೆ ಹೇಳಿಕೆ ನೀಡಿದ ನ್ಯಾಯಾಲಯ, ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದಿಲ್ಲ. ಹುಚ್ಚುನಾಯಿಯ ಮಾತುಗಳ ಬಗ್ಗೆ ನಿರ್ಲಕ್ಷ ಮಾಡಿ ಎಂದು ನ್ಯಾಯಾಲಯ ಚಾಟಿ ಬೀಸಿದೆ.ಮಹೇಶ್ ಶೆಟ್ಟಿ ತಿಮರೋಡಿ ವಾರಕ್ಕೊಮ್ಮೆ ಪುತ್ತೂರು ಮಹಿಳಾ ಪೋಲೀಸ್ ಠಾಣೆಯಲ್ಲಿ ಸಹಿ ಮಾಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ .


