Wednesday, November 25, 2026
Homeಪ್ರಮುಖ-ಸುದ್ದಿಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ಜಾರಿಯಾಗದ ಹಿನ್ನೆಲೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶ ಜಾರಿಯಾಗದ ಹಿನ್ನೆಲೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡುವ ಆದೇಶ ಇನ್ನೂ ಜಾರಿಯಾಗದ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಧರ್ಮಸ್ಥಳದ ಧನಕೀರ್ತಿ ಅರಿಗ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಈಗಾಗಲೇ ಗಡೀಪಾರು ಆದೇಶ ಹೊರಡಿಸಲಾಗಿದೆ. ಆದರೆ, ಆ ಆದೇಶ ಇನ್ನೂ ಜಾರಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಅಧಿಕಾರಿಗಳು, ಡಿಜಿಪಿ, ಎಡಿಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಒಟ್ಟು 9 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ, ನೋಟಿಸ್ ಜಾರಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮೂರು ದಿನಗಳಲ್ಲಿ ಪೂರ್ಣಗೊಳಿಸುವಂತೆ ಅರ್ಜಿದಾರರಿಗೆ ಸೂಚಿಸಿದೆ. ನೋಟಿಸ್‌ಗೆ ಉತ್ತರಿಸಲು ಡಿಸೆಂಬರ್ 16ರವರೆಗೆ ಗಡುವು ನೀಡಿದ್ದು, ಅಂದೇ ಮುಂದಿನ ವಿಚಾರಣೆ ನಡೆಯಲಿದೆ.

- Advertisement -

Latest News

error: Content is protected !!