Tuesday, May 14, 2024
Homeಕರಾವಳಿಬೆಳ್ತಂಗಡಿ : ಭಾಸ್ಕರ್ ನಾಯ್ಕ್ ಮೇಲೆ ತಿಮರೋಡಿ ತಂಡದಿಂದ ಹಲ್ಲೆ ಪ್ರಕರಣ; ಈವರೆಗೆ ತಿಮರೋಡಿ ತಂಡದ...

ಬೆಳ್ತಂಗಡಿ : ಭಾಸ್ಕರ್ ನಾಯ್ಕ್ ಮೇಲೆ ತಿಮರೋಡಿ ತಂಡದಿಂದ ಹಲ್ಲೆ ಪ್ರಕರಣ; ಈವರೆಗೆ ತಿಮರೋಡಿ ತಂಡದ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರು: ಸೆಪ್ಟಂಬರ್ 15ರೊಳಗೆ ವರದಿ ನೀಡಲು ಹೈಕೋರ್ಟ್ ಆದೇಶ

spot_img
- Advertisement -
- Advertisement -

ಬೆಳ್ತಂಗಡಿ : ಕಳೆದ ಒಂಬತ್ತು ದಿನದ ಹಿಂದೆ ಉಜಿರೆಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಪೊಲೀಸರ ವಿರುದ್ಧ ಹಲ್ಲೆಗೊಳಗಾದ ಭಾಸ್ಕರ್ ನಾಯ್ಕ್ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಸೆಪ್ಟಂಬರ್ 15ರೊಳಗೆ ಈ ಬಗ್ಗೆ ತನಿಖಾ ವರದಿ ನೀಡುವಂತೆ ತಿಳಿಸಿದೆ.

ಮಹೇಶ್ ಶೆಟ್ಟಿ ತಿಮರೋಡಿಯ ಮಾಜಿ ಆಪ್ತ ಭಾಸ್ಕರ್ ನಾಯ್ಕ್ ಸಪ್ಟೆಂಬರ್ 3 ರಂದು ಸಂಜೆ ಮಂಗಳೂರಿನಲ್ಲಿ ಯೂಟ್ಯೂಬ್ ಚಾನಲ್ ಗೆ ಸಂದರ್ಶನ ನೀಡಿ ವಾಪಸ್ ಬರುವಾಗ ಮಹೇಶ್ ಶೆಟ್ಟಿ ತಿಮರೋಡಿ ,ಮೋಹನ್ ಶೆಟ್ಟಿ ,ಮುಖೇಶ್ ಶೆಟ್ಟಿ,ಶೆಟ್ಟಿ,ನಿತೀನ್ @ ನೀತು, ಪ್ರಜ್ವಲ್ ಕೆವಿ ಗೌಡ, ಪ್ರಮೋದ್ ಶೆಟ್ಟಿ ಮತ್ತಿತರರು ಕಾರು ಅಡ್ಡ ಹಾಕಿ ಹಲ್ಲೆ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು.

ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡವನ್ನು ಒಂಬತ್ತು ದಿನ ಕಳೆದರೂ ಈವರೆಗೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ. ಅದಲ್ಲದೆ ಬೆಳ್ತಂಗಡಿ ಮತ್ತು ಕಟೀಲಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಭಾಗವಹಿಸಿದ್ದರು. ಈ ಬಗ್ಗೆ ಭಾಸ್ಕರ್ ನಾಯ್ಕ್ ಹೈಕೋರ್ಟ್ಗೆ ಸೋಮವಾರ ಮೊರೆ ಹೋಗಿದ್ದರು. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಸೆಪ್ಟಂಬರ್ 15ರೊಳಗೆ ಈ ಬಗ್ಗೆ ತನಿಖಾ ವರದಿ ನೀಡುವಂತೆ ಹೈಕೋರ್ಟ್ ಆದೇಶ ಮಾಡಿದೆ.ಖ್ಯಾತ ಹೈಕೋರ್ಟ್ ವಕೀಲಕರಾದ ರಾಜ್ ಶೇಖರ್ ಹಲ್ಲೆಗೊಳಾಗದ ಭಾಸ್ಕರ್ ನಾಯ್ಕ್ ಪರವಾಗಿ ವಾದಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

ಈ ಬಗ್ಗೆ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ನಮಗೆ ಬಂದಿಲ್ಲ. ಹೈಕೋರ್ಟ್‌ ಆದೇಶ ನೀಡಿದೆ ಎಂಬುದು ಗಾಳಿ ಸುದ್ದಿ ಎಂದಿದ್ದಾರೆ. ಈ ಮೂಲಕ ಬೆಳಗ್ಗಿನಿಂದ ಹರಿದಾಡುತ್ತಿದ್ದ ಸುದ್ದಿಗೆ ಎಸ್ಪಿ ಬ್ರೇಕ್ ಹಾಕಿದ್ದಾರೆ.

- Advertisement -
spot_img

Latest News

error: Content is protected !!