Friday, October 4, 2024
Homeಕರಾವಳಿಗಣೇಶ ಹಬ್ಬದಂದು ಮಹೇಶ್‌ ಶೆಟ್ಟಿ ತಿಮರೋಡಿ ಪ್ರಚೋದನಾಕಾರಿ ಭಾಷಣ; ದೂರು ದಾಖಲು

ಗಣೇಶ ಹಬ್ಬದಂದು ಮಹೇಶ್‌ ಶೆಟ್ಟಿ ತಿಮರೋಡಿ ಪ್ರಚೋದನಾಕಾರಿ ಭಾಷಣ; ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ: ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್‌ ಶೆಟ್ಟಿ ತಿಮರೊಡಿ ಅವರು ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ ಎಂದು ತಿಳಿದು ಬಂದಿದೆ.

ದೂರಿನಲ್ಲಿರುವ ವಿವರಗಳು: ಸಾರ್ವಜನಿಕ ಸಂಸ್ಥೆಗಳ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಉಜಿರೆ ಮಹೇಶ್‌ ಶೆಟ್ಟಿ ತಿಮರೋಡಿ (55) ಅವರು ಅವಹೇಳನಕಾರಿಯಾಗಿ ಮಾತನಾಡಿ ಅವಾಚ್ಯ ಮತ್ತು ಕೀಳು ಶಬ್ದಗಳನ್ನು ಬಳಸಿದ್ದಾರೆ. ಯೂಟ್ಯೂಬ್‌ ಚಾನೆಲ್‌ಗ‌ಳಲ್ಲಿ ಇದರ ವೀಡಿಯೋಗಳು ಪ್ರಸಾರಗೊಂಡಿದ್ದು, ಆದುದರಿಂದ ಅವರ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳಬೇಕು. ಧಾರ್ಮಿಕ ಸಮಾರಂಭದಲ್ಲಿ ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ ಟೀಕೆ ಮಾಡಿದ್ದಲ್ಲದೆ ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷ‌ಣ ಮಾಡಿದ್ದಾರೆ.

ಜೈನ ಮತ್ತು ಹಿಂದೂ ಧರ್ಮ/ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟುಮಾಡಲು ಮತ್ತು ಜನರು ದಂಗೆ ಏಳುವಂತೆ ಆರೋಪಿ ಪ್ರಯತ್ನಿಸಿದ್ದು, ಈ ಮೂಲಕ ಜೈನ ವರ್ಗದ ಜನರ ಮತ್ತು ಜೈನ ಸಮುದಾಯಗಳ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸಲು ಮತ್ತು ಅವಹೇಳನವನ್ನು ಉಂಟು ಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ವಿರುದ್ಧ ತ್ವರಿತವಾಗಿ ತನಿಖೆ ನಡೆಸಿ ಸಾರ್ವಜನಿಕ ಶಾಂತಿ ಮತ್ತು ನ್ಯಾಯಕ್ಕಾಗಿ ಅಗತ್ಯವಾದ ಕಾನೂನು ಕ್ರಮ ಜರುಗಿಸಿ ಎಂದು ಪೆನ್‌ಡ್ರೈವ್‌ ಸಹಿತ ಇತರ ದಾಖಲೆಗಳೊಂದಿಗೆ ಠಾಣೆಗೆ ಜೈನ ಸಮುದಾಯದಿಂದ ದೂರು ನೀಡಲಾಗಿದೆ.

- Advertisement -
spot_img

Latest News

error: Content is protected !!