Tuesday, October 13, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ತಲವಾರು ಮತ್ತು ಬಂದೂಕು ಪತ್ತೆ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ...

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ತಲವಾರು ಮತ್ತು ಬಂದೂಕು ಪತ್ತೆ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ ಠಾಣೆಗೆ ವಿಚಾರಣೆಗೆ ಹಾಜರಾಗುವುದು ಡೌಟ್

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಎರಡು ಮರದ ಹಿಂದು ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿದ್ದು. ತನಿಖೆಗಾಗಿ ಪೊಲೀಸ್ ಠಾಣೆಗೆ ಹಾಜರಾಗುವುದು ಬಹುತೇಕ ಡೌಟ್ ಎನ್ನಲಾಗಿದೆ.

ಬೆಳ್ತಂಗಡಿ ಪೊಲೀಸರು ಸೆ.19 ರಂದು ಬೆಳಗ್ಗೆ 6 ಗಂಟೆಗೆ  ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ತೆರಳಿದಾಗ ತಿಮರೋಡಿ ಮನೆಯಲ್ಲಿರದೆ ನಾಪತ್ತೆಯಾಗಿದ್ದು ಸೆ.21 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದರು ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದು ವಿಚಾರಣೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ.21 ರಂದು(ಇಂದು) ಹಾಜರಾಗುವುದು ಡೌಟ್ ಎನ್ನಲಾಗಿದೆ.

ಒಂದು ವೇಳೆ ಠಾಣೆಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಮತ್ತೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ತಿಮರೋಡಿ ಮಹೇಶ್ ಶೆಟ್ಟಿ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಎಸ್.ಐ.ಟಿ ಎಸ್ಪಿ.ಸಿ.ಎ.ಸೈಮನ್ ನೀಡಿದ ದೂರಿನ ಮೇರೆಗೆ ARMS ACT 1959(U/S-25(1),25(1-A),24(1-B)(a))  ಅಡಿಯಲ್ಲಿ ಉಜಿರೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!