Monday, May 6, 2024
Homeತಾಜಾ ಸುದ್ದಿರಾಜ್ಯ ವಕ್ಫ್ ಬೋರ್ಡ್ ನಿಂದ ಮಹತ್ವದ ಸುತ್ತೋಲೆ : ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ...

ರಾಜ್ಯ ವಕ್ಫ್ ಬೋರ್ಡ್ ನಿಂದ ಮಹತ್ವದ ಸುತ್ತೋಲೆ : ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧ್ವನಿ ಮಸೀದಿಗಳಲ್ಲಿ ಧ್ವನಿವರ್ಧಕ ಬಂದ್

spot_img
- Advertisement -
- Advertisement -

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಮಹತ್ವದ ಸುತ್ತೋಲೆಯನ್ ಹೊರಡಿಸಿದೆ. ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ನೋಂದಣಿಯಾಗಿರೋ ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ಸೂಚಿಸಲಾಗಿದೆ.

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್ ಬೋರ್ಡ್ ಸಭೆ ನಡೆಸಿತ್ತು. ಈ ಸಭೆಯಲ್ಲಿ ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ಬೆನ್ನಲ್ಲೇ ಮಹತ್ವದ ಸುತ್ತೋಲೆ ಹೊರಡಿಸಿರುವ ರಾಜ್ಯ ವಕ್ಫ್ ಬೋರ್ಡ್, ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ಸೂಚಿಸಿದೆ. ಆದರೆ, ಅಝಾನ್‍ಗೆ ಯಾವುದೇ ನಿಬರ್ಂಧ ಇಲ್ಲ ಎಂದು ತಿಳಿಸಿದೆ.

- Advertisement -
spot_img

Latest News

error: Content is protected !!