Tuesday, April 30, 2024
Homeಕರಾವಳಿಮಂಗಳೂರು ಜಂಕ್ಷನ್ ನಲ್ಲಿ  ಆಗಸ್ಟ್ 6 ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

ಮಂಗಳೂರು ಜಂಕ್ಷನ್ ನಲ್ಲಿ  ಆಗಸ್ಟ್ 6 ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ

spot_img
- Advertisement -
- Advertisement -

ಮಂಗಳೂರು; ಆಗಸ್ಟ್ 6, 2023 ರ ಭಾನುವಾರದಂದು ಬೆಳಗ್ಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರನ್ನು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಅಭಿನಂದಿಸಿದಾರೆ. 

ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು  ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು.  ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!