Thursday, June 4, 2026
HomeUncategorizedಹಿಂದೂ ಕಾರ್ಯಕರ್ತ ಹರ್ಷ ಕೊಲೆಯ ನಿಜ ಕಾರಣ ಬಯಲು ಮಾಡಿದ ಎನ್ಐಎ

ಹಿಂದೂ ಕಾರ್ಯಕರ್ತ ಹರ್ಷ ಕೊಲೆಯ ನಿಜ ಕಾರಣ ಬಯಲು ಮಾಡಿದ ಎನ್ಐಎ

- Advertisement -
- Advertisement -

ಬೆಂಗಳೂರು; ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೆ ನಿಜವಾದ ಕಾರಣ ಏನು ಎಂಬುವುದನ್ನು ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ತನ್ನ ತನಿಖಾ ವರದಿಯಲ್ಲಿ ಹೇಳಿದೆ.

ಶಿವಮೊಗ್ಗದಲ್ಲಿ ಕೋಮುಗಲಭೆ ಎಬ್ಬಿಸುವ ಉದ್ದೇಶದಿಂದ ಹತ್ಯೆ ನಡೆದಿದೆ. ಜನರಿಗೆ ಭಯವುಂಟು ಮಾಡೋದು ಆರೋಪಿಗಳ ಯೋಜನೆಯಾಗಿತ್ತು ಎಂದು ಎಫ್‌ಐಆರ್‌ನ ಸಾರಾಂಶದಲ್ಲಿ ಎನ್‌ಐಎ ಉಲ್ಲೇಖಿಸಿದೆ.

ಶಿವಮೊಗ್ಗ ಹರ್ಷನ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಕೊಲೆಯ ಉದ್ದೇಶ ಸಮಾಜದಲ್ಲಿ ಭಯವನ್ನುಂಟು ಮಾಡೋದಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶ ಆಗಿತ್ತು ಎಂದು ತನಿಖಾ ವರದಿಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!