Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ

ಮಂಗಳೂರಿನಲ್ಲಿ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ

- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನ ನೆಹರು ಮೈದಾನದಲ್ಲಿ ಯೋಜನೆಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಯೋಜನೆಯ ರಾಯಭಾರಿ ಮತ್ತು ಚಲನಚಿತ್ರ ನಟಿ ಸಪ್ತಮಿ ಗೌಡ ಭಾಗಿಯಾಗಿದ್ದರು.ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕವಾಗಿ ಮುಟ್ಟಿನ ಕಪ್ ಗಳ ಉಚಿತ ವಿತರಣೆ ಮಾಡಲಾಯಿತು.

ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!