Wednesday, June 26, 2024
Homeತಾಜಾ ಸುದ್ದಿನಾಳೆ ಅಮಿತ್ ಷಾ ನೇತೃತ್ವದಲ್ಲಿ ಮಹತ್ವದ ರಾಜ್ಯ ಬಿಜೆಪಿ ಸಭೆ

ನಾಳೆ ಅಮಿತ್ ಷಾ ನೇತೃತ್ವದಲ್ಲಿ ಮಹತ್ವದ ರಾಜ್ಯ ಬಿಜೆಪಿ ಸಭೆ

spot_img
- Advertisement -
- Advertisement -

ಬೆಂಗಳೂರು: ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದಾರೆ.

ನಾಳೆ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಅಮಿತ್ ಷಾ, ಇಂದು ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ‌.

ಚುನಾವಣಾ ಸಿದ್ಧತೆಯ ಭಾಗವಾಗಿ ನಾಳೆ ಖಾಸಗಿ ಹೋಟೆಲ್ ನಲ್ಲೇ ಸಭೆ ನಡೆಸಲಿರುವ ಅಮಿತ್ ಷಾ, ನಾಳೆ ಮಧ್ಯಾಹ್ನ ಸಿಎಂ ಅಧಿಕೃತ ನಿವಾಸದಲ್ಲಿ ಭೋಜನ ಸ್ವೀಕರಿಸಲಿದ್ದಾರೆ.

ನಾಳೆ ಸಂಜೆ ಅಮಿತ್ ಷಾ ವಾಸ್ತವ್ಯ ಹೂಡಿರುವ ಖಾಸಗಿ ಹೋಟೆಲ್ ನಲ್ಲೇಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯರ ಜೊತೆ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿದಂತೆ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಅಮಿತ್ ಷಾ ಭೇಟಿ ಮತ್ತು ಸಭೆಗಳು ರಾಜ್ಯ ಬಿಜೆಪಿಯಲ್ಲಿ ನಿರೀಕ್ಷೆಗಳನ್ನು ಮೂಡಿಸಿವೆ.

- Advertisement -
spot_img

Latest News

error: Content is protected !!