Sunday, February 16, 2025
Homeಅಪರಾಧಅಕ್ರಮ ಗೋ ಮಾಂಸ ಮಾಡಿ ತ್ಯಾಜ್ಯ ನದಿಗೆ ಎಸೆತ; ಗೋವುಗಳ ತಲೆ ಸೇರಿದಂತೆ ಅವಶೇಷಗಳು ಪತ್ತೆ

ಅಕ್ರಮ ಗೋ ಮಾಂಸ ಮಾಡಿ ತ್ಯಾಜ್ಯ ನದಿಗೆ ಎಸೆತ; ಗೋವುಗಳ ತಲೆ ಸೇರಿದಂತೆ ಅವಶೇಷಗಳು ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಸೇತುವೆ ಬಳಿ ಅಕ್ರಮ ಗೋ ಮಾಂಸ ಮಾಡಿ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ತುಂಬಿಸಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಈ ಘಟನೆಯು ಡಿ.17 ಮಂಗಳವಾರದಂದು ಬೆಳಕಿಗೆ ಬಂದಿದ್ದು, ದನದ ತಲೆ ಸೇರಿದಂತೆ ಚರ್ಮ ಹಾಗೂ ಇತರ ಅವಶೇಷಗಳು ಸುಮಾರು ಹನ್ನೊಂದು ಗೋಣಿಯಲ್ಲಿ ಪತ್ತೆಯಾಗಿದೆ.

ಅಕ್ರಮವಾಗಿ ಗೋ ಮಾಂಸವನ್ನು ಮಾಡಿ ಉಳಿದ ತ್ಯಾಜ್ಯಗಳನ್ನು ಗೋಣಿಯಲ್ಲಿ ತುಂಬಿಸಿ, ಸೇತುವೆಯಿಂದ ಎಸೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆ ಸಿಬಂದಿ ಆಗಮಿಸಿ ಪರಿಶೀಲಿಸಿದ್ದಾರೆ. ಸಾರ್ವಜನಿಕರು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!