Sunday, April 28, 2024
Homeಕರಾವಳಿಮಂಗಳೂರು: ಮಳಲಿ ಮಸೀದಿ ವಿವಾದ : ಕೋರ್ಟ್ ನಲ್ಲಿ ಇಂದು ಕೂಡ ಮುಂದುವರೆದ ವಿಚಾರಣೆ

ಮಂಗಳೂರು: ಮಳಲಿ ಮಸೀದಿ ವಿವಾದ : ಕೋರ್ಟ್ ನಲ್ಲಿ ಇಂದು ಕೂಡ ಮುಂದುವರೆದ ವಿಚಾರಣೆ

spot_img
- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ  ಇಂದು ಕೂಡ ವಿಚಾರಣೆ ಮುಂದುವರೆಯಿತು.

ಮಳಲಿ‌ ಮಸೀದಿ ಪರ ವಕೀಲ ಎಂ.ಪಿ.ಶೆಣೈ ವಾದ ಮಂಡನೆ ಮಾಡಿದರು.ಮಳಲಿಯಲ್ಲಿರೋದು ಮಸೀದಿ ಅಂತ ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದು ದಾಖಲಾಗಿದೆ. ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದು ಕರೆಯುತ್ತಾರೆ.

ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು  ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ.ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ಅರ್ಜಿಯನ್ನು ವಜಾಗೊಳಿಸುವಂತೆ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು  ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ..

- Advertisement -
spot_img

Latest News

error: Content is protected !!