Friday, May 10, 2024
Homeಕರಾವಳಿಮಂಗಳೂರು; ಮಳಲಿ ಮಸೀದಿ ವಿವಾದ ಪ್ರಕರಣ :  ಆಗಸ್ಟ್ 1 ಕ್ಕೆ ತೀರ್ಪನ್ನು ಕಾಯ್ದಿರಿಸಿದ ಕೋರ್ಟ್

ಮಂಗಳೂರು; ಮಳಲಿ ಮಸೀದಿ ವಿವಾದ ಪ್ರಕರಣ :  ಆಗಸ್ಟ್ 1 ಕ್ಕೆ ತೀರ್ಪನ್ನು ಕಾಯ್ದಿರಿಸಿದ ಕೋರ್ಟ್

spot_img
- Advertisement -
- Advertisement -

ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯವು ಆ.1ಕ್ಕೆ ತೀರ್ಪು ಕಾಯ್ದಿರಿಸಿದೆ.

ಸಿವಿಲ್ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಸ್ಥಳೀಯರಾದ ಮನೋಜ್ ಕುಮಾರ್ ಧನಂಜಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದ್ದ ಪ್ರತಿಯನ್ನು ಮಸೀದಿ ಪರ ವಕೀಲರು ಇಂದು ಸಿವಿಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ ಆದೇಶ ಪ್ರತಿಯನ್ನು ಸ್ವೀಕರಿಸಿದ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ವಾದವಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಈ ವೇಳೆ ಸ್ಥಳೀಯರಾದ ಧನಂಜಯ ಮತ್ತು ಮನೋಜ್ ಕುಮಾರ್ ಮತ್ತಿತರರು ಸಿವಿಲ್ ನ್ಯಾಯಾಲಯ ತೀರ್ಪು ನೀಡುವುದನ್ನು ತಡೆಹಿಡಿಯಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಗೆ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆದು ಹೈ ಕೋರ್ಟ್ ತೀರ್ಪು ನೀಡಿದ ಬಳಿಕವಷ್ಟೇ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಮಳಲಿ ಪೇಟೆ ಮಸೀದಿಗೆ ಸಂಬಂಧಿಸಿ ತೀರ್ಪು ಪ್ರಕಟಿಸಬೇಕೆಂದು ಸೂಚನೆ ನೀಡಿತ್ತು. ಹೀಗಾಗಿ ಸಿವಿಲ್ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸದೆ ಕಾಯ್ದಿರಿಸಿತ್ತು.

ಈ ಬೆಳವಣಿಗೆಗಳ ಬಳಿಕ ತೀರ್ಪು ತಡೆಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆತ್ತಿಕೊಂಡ ಮಾನ್ಯ ಕರ್ನಾಟಕ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಕಳೆದ ವಾರ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸಿದೆ.

- Advertisement -
spot_img

Latest News

error: Content is protected !!