Monday, June 8, 2026
Homeಕರಾವಳಿಮಂಗಳೂರು: ಶೂ ಸಾಕ್ಸ್‌ ನಲ್ಲಿ ಅರ್ಧ ಕೆಜಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಶೂ ಸಾಕ್ಸ್‌ ನಲ್ಲಿ ಅರ್ಧ ಕೆಜಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರು: ಶೂ ಸಾಕ್ಸ್ ನಲ್ಲಿ ಅರ್ಧ ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ್ದ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿಯಾಗಿದ್ದು, ಆರೋಪಿಯಿಂದ ಆತನಿಂದ 24.44 ಲಕ್ಷ ರೂ.ಗಳ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಬಂಧಿತನನ್ನು ಕಾಸರಗೋಡಿನ ಅಬೂಬಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಐಎಕ್ಸ್ 384 ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ್ದ. ಆತನನ್ನು ಶೋಧಿಸಿದಾಗ ತಾನು ಧರಿಸಿದ್ದ ಸಾಕ್ಸ್‌ನಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದ. ಈತನಿಂದ 24.44 ಲಕ್ಷ ಮೌಲ್ಯದ 504 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!