Wednesday, July 29, 2026
Homeಕರಾವಳಿಉಡುಪಿತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಒಮಾನ್ ಘಟಕದ ನೂತನ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ

ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಒಮಾನ್ ಘಟಕದ ನೂತನ ಅಧ್ಯಕ್ಷರಾಗಿ ಮಲ್ಲಾರ್ ಶಶಿಧರ ಶೆಟ್ಟಿ ನೇಮಕ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರ್ ಗ್ರಾಮದ ಮೂಲದ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ಭಾರತೀಯ ಸಂಸ್ಕೃತಿಯ ಪ್ರಚಾರಕರಾದ ಶ್ರೀ ಮಲ್ಲಾರ್ ಶಶಿಧರ ಶೆಟ್ಟಿ ಅವರು ತುಳುವ ಮಹಾಸಭೆ ಇಂಟರ್ನ್ಯಾಷನಲ್‌ನ ಒಮಾನ್ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ವಾಣಿಜ್ಯ ಪದವೀಧರರಾಗಿರುವ ಜೊತೆಗೆ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರುವ ಇವರು, ಒಮಾನ್‌ನ ಪ್ರಸಿದ್ಧ ‘Abeer Group of Companies’ ಸಂಸ್ಥೆಯ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಳೆದ ಐದು ದಶಕಗಳಿಂದ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿರುವ ಇವರು, ಮಹಾದೇವಿ ಕಲ್ಚರಲ್ ಕ್ಲಬ್, ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಅಯ್ಯಪ್ಪ ಸೇವಾ ಸಮಿತಿ (ಮಸ್ಕತ್), ಅಧ್ಯಾತ್ಮಿಕ ಸಮಿತಿ ಹಾಗೂ ಬಾಲಭಾರತಿ ಸ್ಟಡಿ ಸೆಂಟರ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪ್ರಸ್ತುತ ಭಾರತೀಯ ಪ್ರವಾಸಿ ಮಂಚ್–ಕರ್ನಾಟಕ ಘಟಕದ ಅಧ್ಯಕ್ಷರಾಗಿ, ಒಮಾನ್ ಬಂಟ್ಸ್ ಸಂಘ ಹಾಗೂ ತುಳು ಕೂಟ ಮಸ್ಕತ್‌ನ ಸಂಸ್ಥಾಪಕ ಸದಸ್ಯರಾಗಿರುವ ಇವರು, ಒಮಾನ್‌ನಲ್ಲಿ ತುಳು ಲಿಪಿಯ ಪ್ರಚಾರ ಮತ್ತು ಬೋಧನೆಗೂ ಮಾರ್ಗದರ್ಶಕರಾಗಿದ್ದಾರೆ.

- Advertisement -

Latest News

error: Content is protected !!