Saturday, May 18, 2024
Homeತಾಜಾ ಸುದ್ದಿರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

spot_img
- Advertisement -
- Advertisement -

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಕುರಿತು ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯಸಭೆಯ ಸಭಾಪತಿಗೆ ಪತ್ರ ಬರೆದಿದೆ. ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಇಲ್ಲಿಯವರೆಗೆ ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವರ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕರಾಗಿದ್ದರು. ಸದ್ಯ ರಾಜ್ಯಸಭೆಯಲ್ಲಿ ಕೂಡ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ.

- Advertisement -
spot_img

Latest News

error: Content is protected !!