Friday, May 17, 2024
Homeತಾಜಾ ಸುದ್ದಿನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

spot_img
- Advertisement -
- Advertisement -

ವದೆಹಲಿ: ಎಐಸಿಸಿ ಅಧ್ಯಕ್ಷರಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕೇಂದ್ರ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಚುನಾವಣಾ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

24 ವರ್ಷಗಳ ನಂತ್ರ ಮೊದಲ ಬಾರಿಗೆ ಗಾಂಧಿಯೇತರರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಗಾಂಧಿ ಕುಟುಂಬದವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಿಂದ ಹೊರಗುಳಿದಿದ್ದರು.

ಅಧಿಕಾರ ವಹಿಸಿಕೊಳ್ಳುವ ಮುನ್ನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ನಂತ್ರ, ಇಂದು ಬೆಳಗ್ಗೆ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದರು . ಅಲ್ಲದೇ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ, ಮಾಜಿ ಉಪ ಪ್ರಧಾನಿ ಜಗಜೀವನ್ ರಾಮ್ ಅವರ ಸ್ಮಾರಕಗಳಿಗೂ ಭೇಟಿ ನೀಡಿ ನಮನ ಸಲ್ಲಿಸಿದರು.

- Advertisement -
spot_img

Latest News

error: Content is protected !!