Saturday, June 6, 2026
Homeತಾಜಾ ಸುದ್ದಿರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

- Advertisement -
- Advertisement -

ಬೆಂಗಳೂರು: ಜೂನ್ 18 ರಂದು ರಾಜ್ಯಸಭೆಯೆ ನಡೆಯುವ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಉಪಸ್ಥಿತರಿದ್ದರು. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಖಾನ್ ಅಭ್ಯರ್ಥಿಗಳಾಗಿದ್ದಾರೆ.ಇದೇ ವೇಳೆ ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪೇಗೌಡ ಏರ್ ಪೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ಸಸಿ ನೆಟ್ಟು ನೀರೆರದರು‌.

- Advertisement -

Latest News

error: Content is protected !!