Tuesday, September 8, 2026
HomeUncategorizedಮಲ್ಪೆ: ರಸ್ತೆ ಬದಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗು ರಕ್ಷಣೆ

ಮಲ್ಪೆ: ರಸ್ತೆ ಬದಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗು ರಕ್ಷಣೆ

- Advertisement -
- Advertisement -

ಮಲ್ಪೆ: ತಾಲೂಕಿನ ಹೂಡೆಯಲ್ಲಿ ಸೋಮವಾರ ಬೆಳಗಿನ ಜಾವ ನವಜಾತ ಹೆಣ್ಣು ಮಗುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಮಗು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪರೀಕ್ಷೆ ವೇಳೆ ಮಗುವಿನ ಹೃದಯ ಬಡಿತ ಸಕ್ರಿಯವಾಗಿರುವುದು ದೃಢಪಟ್ಟಿದ್ದು, ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ತೊರೆದು ಹೋದವರನ್ನು ಪತ್ತೆ ಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ.

- Advertisement -

Latest News

error: Content is protected !!