Thursday, June 4, 2026
Homeಕರಾವಳಿಉಡುಪಿಮಲ್ಪೆ: ನೋಡನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಮಲ್ಪೆ: ನೋಡನೋಡುತ್ತಿದ್ದಂತೆ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

- Advertisement -
- Advertisement -

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ದಡಕ್ಕೆ ಸಮೀಪಿಸುತ್ತಿರುವಾಗ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮುಳುಗಿರುವ ಘಟನೆ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ.

ಅಂಫಾನ್ ಚಂಡಮಾರುತ ಹಿನ್ನೆಲೆಯಲ್ಲಿ ಜೋರಾಗಿ ಗಾಳಿ ಬೀಸುತ್ತಿತ್ತೆಂದು ಹೇಳಲಾಗಿದ್ದು, ಇದರ ಪರಿಣಾಮ ಬಂಡೆಗೆ ಡಿಕ್ಕಿ ಹೊಡೆದಿದೆ.

ಬೋಟ್‌ನ‌ ಸ್ಟೇರಿಂಗ್ ಕಟ್ ಆಗಿ ನಿಯಂತ್ರಣ ತಪ್ಪಿ ಬಂಡೆ ಢಿಕ್ಕಿ ಹೊಡೆದಿತ್ತು. ಪಕ್ಕದಲ್ಲಿದ್ದ ಇನ್ನೊಂದು ದೋಣಿಯಲ್ಲಿದ್ದವರು ಬೋಟ್‌ನಲ್ಲಿದ್ದ 6 ಜನರನ್ನು ರಕ್ಷಿಸಿದ್ದಾರೆ. ಸುಮಾರು 5 ಲಕ್ಷ ಮೌಲ್ಯದ ಮೀನು, ಬಲೆ, ಡಿಸೇಲ್ ಸಮುದ್ರ ಪಾಲಾಗಿದೆ. 80 ಲಕ್ಷ ರೂಪಾಯಿ ನಷ್ಟ ಅಂದಾಜಿಸಲಾಗಿದೆ. ಘಟನೆ ಸಂಬಂಧ ಕರಾವಳಿ‌ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.,

ರೇಷ್ಮಾ ಖಾರ್ವಿ ಅವರಿಗೆ ಸೇರಿದ ಶ್ರೀ ಸ್ವರ್ಣರಾಜ್ ಆಳ ಸಮುದ್ರ ಬೋಟ್ ಅಪಘಾತಕ್ಕೊಳಗಾಗಿದೆ. ಮೇ 14 ರಂದು ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು.

- Advertisement -

Latest News

error: Content is protected !!