Thursday, June 4, 2026
Homeಕರಾವಳಿಉಡುಪಿಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಕಾರ್ಕಳದಲ್ಲಿ ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಕಾರ್ಕಳದಲ್ಲಿ ಪೊಕ್ಸೋ ಕಾಯ್ದೆಯಡಿ ಯುವಕನ ಬಂಧನ

- Advertisement -
- Advertisement -

ಕಾರ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಯುವಕರ್ನೋವನನ್ನು ಕಾರ್ಕಳ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಗುಲ್ವಾಡಿಯ ಇಮ್ರಾನ್ (24) ಬಂಧಿತ ಆರೋಪಿ. ಈತ 12 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು.  ಅದರಂತೆ ಅಪ್ರಾಪ್ತ ಬಾಲಕಿಯ ಮನೆಗೆ ಭೇಟಿ ನೀಡಿದ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಂತ್ರಸ್ತೆ ಜೊತೆ ಆಪ್ತ ಸಮಾಲೋಚನೆ ನಡೆಸಿದರು.

ಈ ಬಗ್ಗೆ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು ಅದರಂತೆ ಆರೋಪಿ ವಿರುದ್ಧ ಪೋಕ್ಸೋ ಮತ್ತು ಐ.ಟಿ. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಮಾರ್ಗದರ್ಶನ ದಲ್ಲಿ ಠಾಣಾ ಉಪ ನಿರೀಕ್ಷಕ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!