Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು; ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿ ಅರೆಸ್ಟ್

- Advertisement -
- Advertisement -

ಮಂಗಳೂರು; ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು  ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನವನದಲ್ಲಿ ನಡೆದಿದೆ. ಅಕ್ರಮ್ ಪಾಷಾ ಬಂಧಿತ.


ಆರೋಪಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದು, ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಸ್ತು ನಿರತರಾಗಿದ್ದ ದಕ್ಷಿಣ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ದೇವೇಂದ್ರಪ್ಪ ಅವರು ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

ಆರೋಪಿಯು ರಾಜಾಜಿ ಉದ್ಯಾನದ ಮುಖ್ಯ ಗೇಟಿನ ಬಳಿ ಗಾಂಧಿ ಪ್ರತಿಮ ಹತ್ತಿರ ಕಟ್ಟೆಯ ಮೇಲೆ ಕುಳಿತು ಸಾರ್ವಜನಿಕವಾಗಿ ತನ್ನ ಗುಪ್ತಾಂಗವನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿದ್ದ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!