- Advertisement -
- Advertisement -
ವಿಟ್ಲ: ಶಾಲಾ ಬಾಲಕನಿಗೆ ಜೀವ ಬೆದರಿಕೆ ಹಾಕಿದಾತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಂಜೇಶ್ವರದ ಎನ್ಮಕಜೆ ನಿವಾಸಿ ಪದ್ಮರಾಜ್ ಬಂಧಿತ.
ವಿಟ್ಲದ ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಪದ್ಮರಾಜ್ ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
- Advertisement -